ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷರಾದ ಪಿ.ಬಿ. ಹರೀಶ್ ರೈ ಅವರು, "ಕಾದಂಬರಿಕಾರರಾದ ಪಿ.ವಿ. ಪ್ರದೀಪ್ ಕುಮಾರ್ ಅವರು ತಂತ್ರಜ್ಞಾನದ ಸದುಪಯೋಗ ಪಡಿಸಿಕೊಂಡು, AI ಮೂಲಕ ಇಂತಹದ್ದೊಂದು ವಿನೂತನ ಟೆಲಿಚಿತ್ರ ನಿರ್ಮಿಸಿರುವುದು ನಿಜಕ್ಕೂ ಶ್ಲಾಘನೀಯ. ಇದು ಚಿತ್ರರಂಗದಲ್ಲಿ ಒಂದು ಹೊಸ ಸಾಹಸ ಮತ್ತು ಮೈಲಿಗಲ್ಲು. ಈ ವಿಶಿಷ್ಟ ಪ್ರಯತ್ನಕ್ಕೆ ಮತ್ತು ಚಿತ್ರಕ್ಕೆ ಕನ್ನಡಿಗರು ಬೆಂಬಲ ನೀಡಬೇಕು. ಕನ್ನಡ ಚಿತ್ರರಂಗದಲ್ಲಿ ಪ್ರದೀಪ್ ಕುಮಾರ್ ಅವರು ಮತ್ತಷ್ಟು ಯಶಸ್ಸು ಸಾಧಿಸಲಿ" ಎಂದು ಹಾರೈಸಿದರು
ಬಳಿಕ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡ ನಿರ್ದೇಶಕ ಹಾಗೂ ಕಾದಂಬರಿಕಾರ ಪಿ.ವಿ. ಪ್ರದೀಪ್ ಕುಮಾರ್, "ಇದು ನನ್ನದೇ ಕಾದಂಬರಿ ಆಧಾರಿತ ಚಿತ್ರವಾಗಿದೆ. ‘ನಾರಿ ಮುನಿದರೆ ಸಾಮ್ರಾಜ್ಯವೇ ಧೂಳಿಪಟ’ ಎಂಬ ಪ್ರಬಲವಾದ ಟ್ಯಾಗ್‌ಲೈನ್‌ನೊಂದಿಗೆ ಈ ಚಿತ್ರ ಮೂಡಿಬಂದಿದೆ. ವಿಶೇಷವೆಂದರೆ, ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನ ಮಾತ್ರ ನನ್ನದಾಗಿದ್ದು, ಚಿತ್ರದಲ್ಲಿ ಕಾಣಿಸಿಕೊಳ್ಳುವ ಎಲ್ಲಾ ಪಾತ್ರಧಾರಿಗಳನ್ನು (Characters) ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕವೇ ಸೃಷ್ಟಿಸಲಾಗಿದೆ" ಎಂದರು.
ಮುಂದುವರಿದು ಮಾತನಾಡಿದ ಅವರು, ಸುಮಾರು 45 ನಿಮಿಷಗಳ ಅವಧಿಯ ಈ ಪ್ರಾಯೋಗಿಕ ಟೆಲಿಚಿತ್ರವನ್ನು ಮುಂದಿನ ದಿನಗಳಲ್ಲಿ ವಿವಿಧೆಡೆ ಪ್ರದರ್ಶಿಸುವ ಮತ್ತು ಓಟಿಟಿ ಹಾಗೂ ಡಿಜಿಟಲ್ ವೇದಿಕೆಗಳ ಮೂಲಕ ಜನರಿಗೆ ತಲುಪಿಸುವ ಯೋಚನೆ ಇದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾದ ರಾಜೇಶ್ ಪೂಜಾರಿ, ಚಿತ್ರದ ನಿರ್ಮಾಪಕಿಯಾದ ಸುನೀತಾ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು. ಇಡೀ ಕಾರ್ಯಕ್ರಮವನ್ನು ರೇಮಂಡ್ ಡಿಕುನ್ಹಾ ತಾಕೋಡೆ ಅವರು ಅತ್ಯಂತ ಅಚ್ಚುಕಟ್ಟಾಗಿ ನಿರೂಪಿಸಿದರು.
Comments (0)
Post Comment
Report Abuse
Be the first to comment using the form below.