‘ಅದಿತಿ’ ಕೃತಿ ಬಿಡುಗಡೆ
ಕಿನ್ನಿಗೋಳಿ: ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜರುಗಿದ ಕೋ.ಅ. ಉಡುಪರ ಸಂಸ್ಮರಣಾ ಸಮಾರಂಭ ಹಾಗೂ ‘ಯುಗ ಪುರುಷ’ದ ಸಂಸ್ಥಾಪಕ ದಿನದ ವಿಶೇಷ ಕಾರ್ಯಕ್ರಮದಲ್ಲಿ, ಪಿ.ವಿ. ಪ್ರದೀಪ್ ಕುಮಾರ್ ಅವರ ರಚನೆಯ ‘ಅದಿತಿ’ ಕೃತಿಯು ಲೋಕಾರ್ಪಣೆಗೊಂಡಿತು.
ಯುಗಪುರುಷ ಪ್ರಕಾಶನದಿಂದ ಪ್ರಕಟಿತವಾದ ಈ ಕೃತಿಯನ್ನು ಕರ್ನಾಟಕ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾದ್ಯಕ್ಷ ಹಾಗೂ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಂಬೈನ ಪ್ರಮುಖ ಉದ್ಯಮಿ ತಾಳಿಪಾಡಿಗುತ್ತು ರಾಮಚಂದ್ರ ಶೆಟ್ಟಿ, ಉದ್ಯಮಿ ಪೃಥ್ವಿರಾಜ್ ಆಚಾರ್ಯ, ಕಿನ್ನಿಗೋಳಿ ಪಟ್ಟಣ ಪಂಚಾಯತಿ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಮಂಗಳೂರಿನ ನೆಲ್ಲಿಕಾಯಿ ರಾಘವೇಂದ್ರ ಮರದ ಅರ್ಚಕ ಜಯರಾಮ್ ಉಡುಪ, ಕೃತಿಕಾರ ಪಿ.ವಿ. ಪ್ರದೀಪ್ ಕುಮಾರ್ ಹಾಗೂ ಡಾ. ನಯನಾಭಿರಾಮ ಉಡುಪ ಪ್ರದೀಪ್ ಕುಮಾರ್ ಕಲ್ಕೂರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಸಮಾರಂಭಕ್ಕೆ ಮೆರುಗು ತಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
Comments (0)
Post Comment
Report Abuse
Be the first to comment using the form below.