ಲೇಖಕರಿಗೆ ಪ್ರೋತ್ಸಾಹ ಮತ್ತು ಸಹಕಾರ ನೀಡಿದರೆ ಮಾತ್ರ ಸಮಾಜದಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯ. ಸಾಹಿತಿಗಳು ಸರಸ್ವತಿ ಪುತ್ರರು. ಲಕ್ಷ್ಮೀಪುತ್ರರು ಕೊಂಡು ಓದಿ ಅವರನ್ನು ಬೆಳೆಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಹೇಳಿದರು. ಹೊಸ ಅಂಗಣದ ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ 'ನುಡಿಮುತ್ತು' ಕೃತಿ ಯನ್ನು ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾ ಧ್ಯಕ್ಷ ಡಾ.ಹರಿಕೃಷ್ಣ ಬಿಡುಗಡೆಗೊಳಿಸಿ ಮಾತನಾಡಿದರು. ಧರ್ಮದರ್ಶಿ ಪುನರೂರು ಅವರು ಮಹಾಕುಂಭಾಶ್ವಮೇಧ ಕೃತಿ ಬಿಡುಗಡೆ ಯುವ ಲೇಖಕಿ ಶೆರೋನ್ ಶೆಟ್ಟಿ ಐಕಳ ಅವರ ಮಹಾ ಕುಂಭಾಶ್ವಮೇಧ ಕೃತಿಯನ್ನು ಸಮಾ ರಂಭದ ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ ಬಿಡುಗಡೆಗೊಳಿಸಿದರು. ಖ್ಯಾತ ವೈದ್ಯ ಡಾ.ಅರುಣ್ ಕುಡ್ಡ ಮೂಲ್ಕಿ, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು, ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಮಂಗಳೂರಿನ ಕಥಾಬಿಂದು ಸಂಸ್ಥೆಯ ಪಿ.ವಿ.ಪ್ರದೀಪ್ ಕುಮಾರ್, ಮೂಲ್ಕಿ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಹೊಸ ಅಂಗಣದ ಹರಿಶ್ಚಂದ್ರ ಪಿ. ಸಾಲ್ಯಾನ್, ಉಪಸ್ಥಿತರಿದ್ದರು. ದಿನೇಶ್ ಶೆಟ್ಟಿ ಸ್ವಾಗತಿಸಿ, ಸತೀಶ್ ಕಿಲ್ಪಾಡಿ ನಿರೂ ಪಿಸಿದರು. ರವಿಚಂದ್ರ ವಂದಿಸಿದರು.
Comments (0)
Post Comment
Report Abuse
Be the first to comment using the form below.